ಆರೆಸ್ಸೆಸ್ ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರದಲ್ಲಿ ಕೊನೆಗೂ ರಾಷ್ಟ್ರಧ್ವಜ

Update: 2022-08-13 02:45 GMT

ಹೊಸದಿಲ್ಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶುಕ್ರವಾರ ತನ್ನ ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ಸಾಂಪ್ರದಾಯಿಕ ಕೇಸರಿ ಧ್ವಜದ ಬದಲು ರಾಷ್ಟ್ರಧ್ವಜ ಚಿತ್ರವನ್ನು ಹಾಕಿದೆ.

ಆಗಸ್ಟ್ 2ರಿಂದ 15ರವರೆಗೆ ಎಲ್ಲರೂ ತಿರಂಗವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರವಾಗಿ ಬಳಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದರು. ಪ್ರಧಾನಿ ಮನವಿಯನ್ನು ಪ್ರಶ್ನಿಸಿದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ನಿಲುವನ್ನು ಟೀಕಿಸಿದ್ದವು.

ಸಾಮಾಜಿಕ ಜಾಲತಾಣಗಳಲ್ಲಿ ತಿರಂಗ ಬಳಸುವಂತೆ ಮೋದಿಯವರು ಮನವಿ ಮಾಡಿದ್ದಾರೆ. 52 ವರ್ಷ ತನ್ನ ಕೇಂದ್ರ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದ ಅರೆಸ್ಸೆಸ್ ಈ ಸಂದೇಶಕ್ಕೆ ಬದ್ಧವಾಗುತ್ತದೆಯೇ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

ಇದನ್ನು ಓದಿಆರೆಸ್ಸೆಸ್ ಶಾಖೆಗಳಲ್ಲಿ ಮೊದಲು ತ್ರಿವರ್ಣ ಧ್ವಜ ಹಾರಿಸಿ: ಸಿದ್ದರಾಮಯ್ಯ

ಶುಕ್ರವಾರ ಆರೆಸ್ಸೆಸ್ ಪ್ರಚಾರ ವಿಭಾಗದ ಮುಖ್ಯಸ್ಥ ನರೇಂದ್ರ ಠಾಕೂರ್ ಹೇಳಿಕೆ ನೀಡಿ, ಸಂಘದ ಎಲ್ಲ ಶಾಖೆಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಸಂಘ ಆಚರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಹರ್ ಘರ್ ತಿರಂಗ ಅಭಿಯಾನದಲ್ಲೂ ಆರೆಸ್ಸೆಸ್ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವರು ಎಂದು ಹೇಳಿರುವುದಾಗಿ ndtv.com ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News