ಬೆಂಗಳೂರು | 'ಮನೆ ಮನೆಯಲ್ಲಿ ತ್ರಿವರ್ಣ ಧ್ವಜ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Update: 2022-08-13 07:13 GMT

ಬೆಂಗಳೂರು, ಆ.13: 'ಮನೆ ಮನೆಯಲ್ಲಿ ತ್ರಿವರ್ಣ ಧ್ವಜ' ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಅಭಿಯಾನಕ್ಕೆ ಬಲೂನು ಹಾರಿ ಬಿಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದ ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ , ಸ್ವಾರ್ಥ ಮನೋಭಾವನೆಯನ್ನು ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಯುವಜನತೆಗೆ ಕರೆ ನೀಡಿದರು.

ಇದನ್ನೂ ಓದಿ: ಹಿಂದೂ ರಾಷ್ಟ್ರದ ಸಂವಿಧಾನ ಸಿದ್ಧಪಡಿಸುತ್ತಿರುವ ಸ್ವಾಮೀಜಿಗಳ ಗುಂಪು !

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅಬಕಾರಿ ಸಚಿವ ಕೆ.ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅಪ್ಪರ್, ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಡಾ.ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News