ಚಿಕ್ಕಮಗಳೂರು | ತಗ್ಗಿದ ಮಳೆಯಬ್ಬರ: ಮುಂದುವರಿದ ಹಾನಿ

Update: 2022-08-13 06:32 GMT

ಚಿಕ್ಕಮಗಳೂರು, ಆ.13: ಕಾಫಿನಾಡಲ್ಲಿ ಮಳೆಯಬ್ಬರ ಒಂದಿಷ್ಟು ತಗ್ಗಿದ್ದರೂ ಮಳೆ ಅವಾಂತರ ಮುಂದುವರಿದಿದೆ.

ಮೂಡಿಗೆರೆ, ಕಳಸ ಹಾಗೂ ತರೀಕೆರೆ ತಾಲೂಕುಗಳಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದ್ದರೆ, ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಯಲ್ಲಿ ಕಾಂಕ್ರಿಟ್ ರಸ್ತೆ ಕುಸಿದಿದೆ.

ಮೂಡಿಗೆರೆ ತಾಲೂಕಿನ ದಿಣ್ಣೆಕೆರೆ ಗ್ರಾಮದಲ್ಲಿ ದಿನೇಶ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಧರಾಶಾಯಿಯಾಗಿದೆ. ಸಂತ್ರಸ್ತ ಕುಟುಂಬವು ಕುಸಿದ ಮನೆಯ ಅವಶೇಷಗಳ ಅಡಿ ಆಹಾರ ಸಾಮಗ್ರಿ ಹುಡುಕುವ ದೃಶ್ಯ ಮನಕಲಕುವಂತಿತ್ತು.

ಇದನ್ನೂ ಓದಿ: ಬೆಂಗಳೂರು | 'ಮನೆ ಮನೆಯಲ್ಲಿ ತ್ರಿವರ್ಣ ಧ್ವಜ' ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಕಳಸ ತಾಲೂಕಿನ ಕೆಳಗೂಡು ಗ್ರಾಮದಲ್ಲಿ ಹರೀಶ್ ಎಂಬುವರ ಮನೆ ಮೇಲ್ಛಾವಣಿ, ಗೋಡೆ ಕುಸಿದಿದೆ. 

ಅದೇರೀತಿ ತರೀಕೆರೆ ತಾಲೂಕಿನಲ್ಲೂ ಮತ್ತೆ ಮೂರು ಮನೆಗಳ ಗೋಡೆ ಕುಸಿದಿರುವುದು ವರದಿಯಾಗಿದೆ.

ಇಲ್ಲಿನ ಬಾವಿಕೆರೆ ಗ್ರಾಮದ ಬಸಪ್ಪ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಮನೆಗಳಿಗೆ ಹಾನಿ ಸಂಭವಿಸಿದೆ. ಬಿ.ರಾಮನಹಳ್ಳಿ ಗ್ರಾಮದ ದುರ್ಗಮ್ಮ ಎಂಬುವರ ಮನೆ ಗೋಡೆಗೆ ಹಾನಿಯಾಗಿದೆ.

ಕೆಮ್ಮಣ್ಣುಗುಂಡಿ ಕಾಂಕ್ರಿಟ್ ರಸ್ತೆಯಲ್ಲಿ ಬಿರುಕು

ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೆಮ್ಮಣ್ಣುಗುಂಡಿಯಲ್ಲಿ ಕಾಂಕ್ರಿಟ್ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಹೆಬ್ಬೆ ಮತ್ತು ಕೆಮ್ಮಣ್ಣುಗುಂಡಿಗೆ ಗುಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಎಡಬದಿಯಲ್ಲಿ ಸುಮಾರು ಮೂರು ಅಡಿಯಷ್ಟು ಭೂಮಿ ಕುಸಿದಿದೆ. ಇದರಿಂದ ಕಾಂಕ್ರಿಟ್ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ರಸ್ತೆ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News