ಆ.18ಕ್ಕೆ 'ಅಬತರ' ತುಳು ಸಿನೆಮಾ ತೆರೆಗೆ

Update: 2022-08-13 10:34 GMT

ಮಂಗಳೂರು, ಆ.13: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ   ತುಳು ಸಿನೆಮಾ 'ಅಬತರ'  ಆ.18ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕ, ನಟ ಅರ್ಜುನ್ ಕಾಪಿಕಾಡ್ ತಿಳಿಸಿದ್ದಾರೆ.‌

ಈ ಸಿನೆಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪಾಲಿಸ್, ಪಿವಿಆರ್, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್,  ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

ತದನಂತರ ಮುಂಬೈ, ಬೆಂಗಳೂರು, ಕಾಸರಗೋಡು, ಮುಳ್ಳೇರಿಯ, ಸಕಲೇಶಪುರ, ಶುಂಠಿಕೊಪ್ಪ, ತೀರ್ಥಹಳ್ಳಿ, ಕುಂದಾಪುರ, ಶಿವಮೊಗ್ಗ  ಮೊದಲಾದ ಕಡೆಗಳಲ್ಲಿ  ಸಿನೆಮಾ ಬಿಡುಗಡೆಗೊಳ್ಳಲಿದೆ.

ಆ.16 ಮತ್ತು 17ರಂದು ಮಂಗಳೂರು, ಮೂಡುಬಿದಿರೆ, ಪುತ್ತೂರು, ಉಡುಪಿ, ಪಡುಬಿದ್ರೆ, ಕಿನ್ನಿಗೋಳಿ, ಗುರುಪುರ, ಕುಲಶೇಖರ ಮೊದಲಾದ ಅನಾಥಶ್ರಮದಲ್ಲಿರುವ  ಮಕ್ಕಳಿಗೆ ಸಿನೆಮಾವನ್ನು ಉಚಿತವಾಗಿ ಪ್ರದರ್ಶಿಸಲಾಗುವುದು.

 ಪ್ರೇಕ್ಷಕರು ಇಷ್ಟ ಪಡುವಂತೆ ಇದು ಸಂರ್ಪೂ ಹಾಸ್ಯ ಪ್ರಧಾನ ಸಿನೆಮಾ. ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನೂ ನೀಡಲಾಗಿದೆ.

ಅಬತರ ಹಾಸ್ಯ ಸಿನಿಮಾದ ಕತೆಯನ್ನು ಡಾ| ದೇವದಾಸ್ ಕಾಪಿಕಾಡ್ ರಚಿಸಿ, ಅಭಿನಯಿಸಿದ್ದಾರೆ. ತುಳುನಾಡ ಆ್ಯಕ್ಷನ್ ಕಿಂಗ್ 'ಅರ್ಜುನ್ ಕಾಪಿಕಾಡ್' ಅಭಿನಯದ ಜೊತೆಗೆ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ.

  ತಾರಾಗಣದಲ್ಲಿ  ನವೀನ್ ಡಿ ಪಡಿಲ್,  ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿ ಕೃಷ್ಣ, ಸನಿಲ್ ಗುರು,    ಚೇತನ್ ರೈ ಮಾಣಿ  ,ಲಕ್ಷ್ಮೀಶ್, ಸುನೀಲ್ ಚಿತ್ರಾಪುರ ಮತ್ತು ನಾಯಕನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ. 

ಛಾಯಾಗ್ರಾಹಕರಾಗಿ  ವಿಷ್ಣು ಪ್ರಸಾದ್, ಜೇಕಬ್,  ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ ಕೆಲಸ ಮಾಡಿದ್ದಾರೆ. ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ

ಬಿನ್ನೆರ್ ಹಾಡು ಜನಪ್ರಿಯತೆ

 ಅಬತರ ಸಿನಿಮಾದಲ್ಲಿರುವ ಬಿನ್ನೆರ್ ಬೈದಿನ ಹಾಡು ಚಿತ್ರ ಬಿಡುಗಡೆಗೂ ಮುನ್ನವೇ ಯೂಟ್ಯೂಬ್ ನಲ್ಲಿ 5 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯಾಗಿ, ಜನಪ್ರಿಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News