ಕುಶಾಲನಗರ: ಇಬ್ಬರು ವಿದ್ಯಾರ್ಥಿಗಳಿಗೆ ಚೂರಿ ಇರಿತ; ಆರೋಪಿ ಪೊಲೀಸ್ ವಶಕ್ಕೆ
Update: 2022-08-13 17:42 IST
ಮಡಿಕೇರಿ(Madikeri): ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಕುಶಾಲನಗರ(Kushalnagar)ದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.
ಇದೊಂದು ಪ್ರೇಮ ಪ್ರಕರಣ ಎಂದು ಹೇಳಲಾಗುತ್ತಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಇರಿದಿರುವುದಾಗಿ ಆರೋಪಿಸಲಾಗಿದೆ.
ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಶಾಲನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹಲ್ಲೆಗೊಳಗಾದ ಇಬ್ಬರು ಕುಶಾಲನಗರದ ಸರಕಾರಿ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಆರೋಪಿ ಹೋಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.