ಹಾಸನ: ನ್ಯಾಯಾಲಯದ ಆವರಣದಲ್ಲೇ ಪತ್ನಿಯ ಕೊಲೆಗೈದ ಪತಿ

Update: 2022-08-13 14:13 GMT

ಹಾಸನ(Hassan): ವಿಚ್ಛೇದನಕ್ಕಾಗಿ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದ ಪತಿ ನ್ಯಾಯಾಲಯದ ಆವರಣದಲ್ಲೆ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.​ ​ ​

ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಕೊಲೆಗೈದ ಆರೋಪಿ. ಚನ್ನರಾಯಪಟ್ಟಣದ ಚೈತ್ರಾ ಎಂಬವರು ಮೃತಪಟ್ಟವರು.

ಏಳು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದರು.

ವಿಚ್ಛೇದನ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗಳು ಲೋಕ ಅದಾಲತ್ ಇದ್ದ ಕಾರಣ ರಾಜಿ ಸಂಧಾನಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ  ಆರೋಪಿ ಪತಿ ನ್ಯಾಯಾಲಯದ ಆವರಣದಲ್ಲೆ ಪತ್ನಿಯ ಕತ್ತು ಸೀಳಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕುಶಾಲನಗರ: ಇಬ್ಬರು ವಿದ್ಯಾರ್ಥಿಗಳಿಗೆ ಚೂರಿ ಇರಿತ

ತೀವ್ರ ರಕ್ತಸ್ರಾವವಾಗಿ ಬಿದ್ದಿದ್ದ ಚೈತ್ರ ಅವರನ್ನು ಸ್ಥಳಿಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಾಗಿಸಿದ್ದು, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಘಟನೆ ನಡೆದ ನಂತರ ಪರಾರಿ ಆಗಲು ಯತ್ನಿಸಿದ್ದ ಆರೋಪಿ ಶಿವಕುಮಾರ್ ನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದು ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News