ರಾಷ್ಟ್ರೀಯ ಲೋಕ ಅದಾಲತ್; ದ.ಕ.ಜಿಲ್ಲೆಯಲ್ಲಿ 30,729 ಪ್ರಕರಣಗಳು ಇತ್ಯರ್ಥ

Update: 2022-08-13 16:11 GMT

ಮಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವು ಶನಿವಾರ ದ.ಕ.ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ನಡೆಯಿತು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 47 ಬೈಠಕ್‌ಗಳು ನಡೆದಿದ್ದು, 35,649 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಆ ಪೈಕಿ ೩೦,೭೨೯ ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದ್ದು, 18,92,57,121 ರೂ. ಪರಿಹಾರದ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯದ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News