ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ; ಸಾರ್ವಜನಿಕರ ಆಕ್ರೋಶ

Update: 2022-08-13 17:51 GMT

ಶಿವಮೊಗ್ಗ(ಆ.13): ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರವನ್ನು ಹಾಕಿರುವ ವಿಚಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸ್ವಾತಂತ್ರದ 75 ವರ್ಷವಾದ ಹಿನ್ನೆಲೆಯಲ್ಲಿ‌ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿ ಸ್ವಾತಂತ್ರ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಈ ಭಾವಚಿತ್ರಗಳ ಮಧ್ಯದಲ್ಲಿ ಸಾವರ್ಕರ್ ಭಾವಚಿತ್ರ ಗಮನಿಸಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸಿಟಿ ಸೆಂಟರ್ ಮಾಲ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಸಾವರ್ಕರ್ ಸ್ವಾತಂತ್ರ ಹೋರಾಟಗಾರರೇ ಅಲ್ಲ, ಅವರ ಭಾವಚಿತ್ರ ಯಾಕೆ ಹಾಕಿದ್ದೀರಿ? ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ ಹೋರಾಟಗಾರನಾಗಲು ಸಾಧ್ಯ ಎಂದು ಆಕ್ಷೇಪಿಸಿದರು.

ಅಲ್ಲದೆ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಪ್ರತಿಭಟನೆ ಆರಂಭಿಸಿದರು. ಸ್ವಾತಂತ್ರಕ್ಕಾಗಿ ಜೀವ ಕೊಟ್ಟವರ ಭಾವಚಿತ್ರ ಹಾಕುವಂತೆ ಸಾರ್ವಜನಿಕರು ಪಟ್ಟು ಹಿಡಿದರು. ಈ ವೇಳೆ ಸಾವರ್ಕರ್ ಭಾವಚಿತ್ರದೊಂದಿಗೆ ಅಬ್ದುಲ್ ಕಲಾಮ್ ಅಝಾದ್ ಅವರ ಭಾವಚಿತ್ರ ಹಾಕುವುದಾಗಿ ಹೇಳಿದ ಮಾಲ್ ಸಿಬ್ಬಂದಿ ಸಮಸ್ಯೆ ಪರಿಹರಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News