ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ: ಡಿಕೆ ಶಿವಕುಮಾರ್‌ ಟ್ವೀಟ್‌

Update: 2022-08-14 06:19 GMT

ಬೆಂಗಳೂರು : ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್‌ಲಾಲ್‌ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಎಂದು ಡಿಕೆ ಶಿವಕುಮಾರ್‌ ಅವರು ಟ್ವೀಟ್‌ ಮಾಡಿದ್ದಾರೆ.

ನೆಹರೂ ಅವರನ್ನು ಅಪಮಾನಿಸುವ ಹಾಗೂ ಸರ್ಕಾರಿ ಜಾಹೀರಾತಿನಿಂದ ಕೈಬಿಡುವುದರಿಂದ ಇತಿಹಾಸ ಎಂದಿಗೂ ಅವರನ್ನು ಮರೆಯುವುದಿಲ್ಲ. ಆದರೆ ಚರಿತ್ರೆಯು ನಿಮ್ಮ ಸಣ್ಣತನವನ್ನು ನೆನಪಿಡುತ್ತದೆ ಎಂದು ಟ್ವಿಟರ್ ನಲ್ಲಿ ಹೇಳಿದ್ದಾರೆ.‌

ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಜೈಲಿನಿಂದ ಹೊರಬಂದ ಸಾವರ್ಕರ್‌ ಸ್ವಾತಂತ್ರ್ಯ ಹೋರಾಟಗಾರನಾದರೆ, ನಾಲ್ಕು ಆಂಗ್ಲೋ ಮೈಸೂರು ಯುದ್ಧ ಮಾಡಿ ತನ್ನ ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟು ಸಮರದಲ್ಲಿ ಮಡಿದ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಏಕಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News