ಡಾ.ವೀರೇಂದ್ರ ಹೆಗ್ಗಡೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಗೌರವ

Update: 2022-08-14 12:05 GMT

ಮಂಗಳೂರು, ಆ.14: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಹೆಗ್ಗಡೆಯ ನಿವಾಸ (ಬೀಡು)ದಲ್ಲಿ ಗೌರವಿಸಲಾಯಿತು.

ಈ ಸಂದರ್ಭ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ನೂತನ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ, ರವಿ ಶೆಟ್ಟಿ ಜತ್ತಬೆಟ್ಟು, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News