ಆ.15ರಂದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಬೃಹತ್ ರಾಷ್ಟ್ರ ಧ್ವಜಾರೋಹಣ

Update: 2022-08-14 15:20 GMT
ಫೈಲ್‌ ಫೋಟೊ

ಉಳ್ಳಾಲ, ಆ. 14: ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಉಳ್ಳಾಲ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸುಮಾರು 110 ಅಡಿ ಎತ್ತರದಲ್ಲಿ ಬೃಹತ್ ರಾಷ್ಟ್ರ ಧ್ವಜವನ್ನು ಹಾರಿಸಲು ತಯಾರಿ ನಡೆಸಲಾಗಿದೆ.

ಇದರ ಧ್ವಜಾರೋಹಣ ಕಾರ್ಯಕ್ರಮವು ಆ.15ರಂದು ಬೆಳಗ್ಗೆ 10ಕ್ಕೆ ಸರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಆದುದರಿಂದ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರೂ ತಪ್ಪದೇ ಕಾರ್ಯಕ್ರಮದಲ್ಲಿ ಹಾಜರಾಗಬೇಕಾಗಿ ಈ ಮೂಲಕ ಆಮಂತ್ರಣವನ್ನು ನೀಡುತ್ತಿದ್ದೇವೆ ಎಂದು ಉಳ್ಳಾಲ ನಗರ ಸಭೆಯ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News