ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ; ಉಳ್ಳಾಲ-ತೊಕ್ಕೊಟ್ಟುವರೆಗೆ ಕಾಲ್ನಡಿಗೆ ತಿರಂಗ ಯಾತ್ರೆ

Update: 2022-08-14 17:46 GMT

ಉಳ್ಳಾಲ:  ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರ ವತಿಯಿಂದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ 75 ಮೀಟರ್ ಉದ್ದದ ರಾಷ್ಟ್ರ ಧ್ವಜವನ್ನು ಶಾಲಾ ವಿದ್ಯಾರ್ಥಿಗಳು ಉಳ್ಳಾಲದಿಂದ ತೊಕ್ಕೊಟ್ಟು ತನಕ ಕಾಲ್ನಡಿಗೆ ತಿರಂಗ ಯಾತ್ರೆಯಲ್ಲಿ ಪ್ರದರ್ಶಿಸಿದರು.

ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕಳ ಪ್ರತಿಮೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾಲಾರ್ಪಣೆಗೈದು ನಮನ ಸಲ್ಲಿಸಿ ತೊಕ್ಕೊಟ್ಟಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಕೆ. ಧ್ವಜಾರೋಹಣಗೈದರು. ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ ಆಕರ್ಷಕ ತಿರಂಗ ಯಾತ್ರೆ ನಡೆಯಿತು.

ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಸತೀಶ್ ಕುಂಪಲ, ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್  ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು, ಜಯಶ್ರೀ ಕರ್ಕೇರ, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ , ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ನ ನಿಕಟಪೂರ್ವ ಚೇರ್ ಮ್ಯಾನ್‌ ಸಂತೋಷ್ ಕುಮಾರ್ ರೈ ಬೋಳಿಯಾರ್, ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ನಿಕಟಪೂರ್ವ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮುಖಂಡರುಗಳಾದ ಟಿ. ಜಿ. ರಾಜಾರಾಮ್ ಭಟ್, ಸೀತಾರಾಮ ಬಂಗೇರ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ ಹಾಗೂ ನವೀನ್ ಕುಮಾರ್ ಪಾದಲ್ಪಾಡಿ, ಉಪಾಧ್ಯಕ್ಷ ಯಶವಂತ ಅಮೀನ್, ಮಂಡಲ ಮಾಜಿ ಅಧ್ಯಕ್ಷರುಗಳಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ರವಿಶಂಕರ್ ಸೋಮೇಶ್ವರ,  ಧನಲಕ್ಷ್ಮಿ ಗಟ್ಟಿ,  ಹರಿಯಪ್ಪ ಸಾಲ್ಯಾನ್, ಶೇಖರ್ ಕನೀರುತೋಟ ಉಪ ಪಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಆನಂದ ಶೆಟ್ಟಿ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News