ಪಿ.ಎ. ಫಾರ್ಮಸಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಸ್ತಾಂತರ ಕಾರ್ಯಕ್ರಮ

Update: 2022-08-15 04:06 GMT

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಪ್ರಯುಕ್ತ ಧ್ವಜ ಹಸ್ತಾಂತರಿಸುವ ಕಾರ್ಯಕ್ರಮವನ್ನು ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯಲ್ಲಿ ಹಮ್ಮಿಕೊಳ್ಳಲಾಯಿತು.

ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್ ರವರು ಭಾರತೀಯ ಸೈನ್ಯದ ನಿವೃತ್ತ ಸುಬೇದಾರ್ ಮೇಜರ್ ಹಾಗೂ ಪಿ.ಎ. ಕ್ಯಾಂಪಸ್ ಮೇಲ್ವಿಚಾರಕ ರುದ್ರೇಶ್ ರವರಿಗೆ ಹಸ್ತಾಂತರಿಸುವ ಮೂಲಕ "ಹರ್ ಘರ್ ತಿರಂಗಾ" ಅಭಿಯಾನಕ್ಕೆ ಚಾಲನೆ ನೀಡಿದರು.

"ಉತ್ತಮ ಶಿಕ್ಷಣವನ್ನು ಪಡೆದು ಸಚ್ಚಾರಿತ್ರ್ಯವಂತರಾಗಿ ದೇಶದ ಅಭಿವೃದ್ಧಿಗಾಗಿ ದುಡಿಯಬೇಕೆಂದು" ರುದ್ರೇಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಡಾ. ಸಲೀಮುಲ್ಲಾ ಖಾನ್ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಪರಿಶ್ರಮದಿಂದಾಗಿ ಲಭಿಸಿದ ಸ್ವಾತಂತ್ರ್ಯವನ್ನು ಕಾಪಾಡುವುದು, ದೇಶದ ಅಖಂಡತೆಯನ್ನು ಎತ್ತಿ ಹಿಡಿಯುವುದು, ದೇಶದ ಕಾನೂನುಗಳನ್ನು ಪಾಲಿಸವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಆರಂಭದಲ್ಲಿ ಸಾಹಿಲ್ ಪ್ರಾರ್ಥನೆ ನೆರವೇರಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಕ್ವಿಝ್, ಆಶುಭಾಷಣ, ದೇಶಭಕ್ತಿಗೀತೆಯ ಸ್ಪರ್ಧೆಗಳನ್ನು ನಡೆಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News