ಮಂಗಳೂರು : ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ

Update: 2022-08-15 10:37 GMT

ಮಂಗಳೂರು: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ಜಂಟಿ ಆಶ್ರಯದಲ್ಲಿ ಇಂದು ಶಾಲಾ ಮೈದಾನದಲ್ಲಿ ಕಾರ್ಕಳದ ಜ್ಞಾನ ಸುಧಾ ಪಪೂ ಕಾಲೇಜಿನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಗೌರವ ಸಮರ್ಪಿಸಿದರು. ಧ್ವಜಾರೋಹಣದ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಡಾ. ಸುಧಾಕರ ಶೆಟ್ಟಿ ಮಾತನಾಡಿ ಸ್ವಾತಂತ್ರ್ಯಕ್ಕೋಸ್ಕರ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಯಾರೂ ಮರೆಯಬಾರದು. ನಾವು ಇವತ್ತು 75ನೇ ಸ್ವಾತಂತ್ರ್ಯದ ಖುಷಿಯಲ್ಲಿರಬೇಕಾದರೆ ಇವರ ತ್ಯಾಗ ಬಲಿದಾನವೇ ಕಾರಣ. ಪ್ರತಿಯೊಬ್ಬರನ್ನು ಬೆಳೆಸುವಲ್ಲಿ ತಂದೆ ತಾಯಿ ತುಂಬ ಪ್ರಯತ್ನ ಪಟ್ಟಿರುತ್ತಾರೆ. ನಾವು ಹೆತ್ತವರಿಗೆ ಗೌರವಕೊಟ್ಟು ಸಮಾಜದಲ್ಲಿ ಬೆಳೆದಾಗ ಅವರ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಶುಭ ಸಂದರ್ಭದಲ್ಲಿ ಕರೆ ನೀಡಿದರು. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪೂರೈಸಿ ತಮ್ಮನ್ನು ತಾವು ಸಂಶೋಧನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಈ ದೇಶಕ್ಕೆ ಕೊಡುಗೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್ ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಸಗುಣ ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ. ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್, ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ಪೆಟ್ರಿಶಿಯ ಪಿಂಟೊ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತನ್ನು ಸ್ನೇಹ ಇವರು ಹಾಗೂ ವಂದನಾರ್ಪಣೆಯನ್ನು ವಂಶಿ ನೆರವೇರಿಸಿದರು. ಪ್ರತಿಕ್ಷಾ ಕಾರ್ಯಕ್ರಮದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ನಿರೂಪಣೆಯನ್ನು ಶಿಕ್ಷಕಿ ಚೈತ್ರ ಯು. ಭಂಡಾರಿ ಅವರು ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News