ಹೂಡೆ ಸಾಲಿಹಾತ್ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2022-08-15 11:49 GMT

ಉಡುಪಿ: ಹೂಡೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು, ನಮ್ಮ ಹಿರಿಯರ ತ್ಯಾಗ ಬಲಿದಾನಗಳ ಕೊಡುಗೆ ಈ ಸ್ವಾತಂತ್ರ್ಯ. ಈ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಾದ ನಿಮ್ಮ ಜವಾಬ್ದಾರಿ ದೊಡ್ಡದಿದೆ. ಈ 75 ವರ್ಷದಲ್ಲಿ ದೇಶವು ಮಹತ್ತರ ಸಾಧನೆ ಮಾಡಿದೆ. ಈ ಸಾಧನೆಯನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ದು ದೇಶವನ್ನು ಮುಂದುವರಿದ ದೇಶಗಳ ಸಾಲಿನಲ್ಲಿ ನಿಲ್ಲಿಸಬೇಕಾಗಿದೆ ಎಂದು ಹೇಳಿದರು.

NRI ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಹಿತೈಷಿ ಅನ್ಸಾರ್ ಟಿ. ಸ್. ಪಥ ಸಂಚಾಲನ ಉದ್ಘಾಟನೆ ಮಾಡಿದರು.

ನಂತರ ಸಂಸ್ಥೆಯ ವತಿಯಿಂದ ಆಕರ್ಷಕ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥದಲ್ಲಿ ಸಾವಿರಕ್ಕಿಂತ ಅಧಿಕ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾಭಿಮಾನಿಗಳು, ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಜಾಥವು ಸ್ವಾತಂತ್ರ್ಯ ಹೋರಾಟಗಾರರ ಪ್ರತಿರೂಪ ಬಿಂಬಿಸುವ ಟ್ಯಾಬ್ಲೊ, ವಿದ್ಯಾರ್ಥಿಗಳಿಂದ ದೇಶದ ಸೈನ್ಯದ ಪ್ರಾತ್ಯಕ್ಷಿಕೆ, ದೇಶ ಪ್ರೇಮ ಗೀತೆಗಳ ಗಾಯನ, ತ್ರಿವರ್ಣ ಧ್ವಜಗಳ ಸಾಲು ಪ್ರದರ್ಶನ, ಘೋಷಣೆಗಳಿಂದ ಕೂಡಿತ್ತು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹೂಡೆಯ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್, ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇದ್ರಿಸ್ ಹೂಡೆ, ಮೌ. ಆದಮ್ ಸಾಹೇಬ್, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಇರ್ಷಾದುಲ್ಲಾ ಆದಿಲ್, ಅಲ್ತಾಫ್ ನಕ್ವಾ, ಹುಸೇನ್ ಕೋಡಿಬೆಂಗ್ರೆ, ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ, ಪಿಯು ಕಾಲೇಜಿನ ಪ್ರಾಂಶುಪಾಲೆ ದಿವ್ಯ ಪೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸುನಂದಾ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸದಾತ್, ತಸ್ಮಿಯಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News