ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ತಿರಂಗಾ ಯಾತ್ರೆ

Update: 2022-08-15 11:19 GMT

ಉಡುಪಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ತಿರಂಗಾ ಯಾತ್ರೆಯು ಸೋಮವಾರ ಉಡುಪಿ ನಗರದಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಯಾತ್ರೆಯಲ್ಲಿ ಪಾಲ್ಗೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

75 ಮೀಟರ್ ಉದ್ದದ ತಿರಂಗದೊಂದಿಗೆ ಬಿಜೆಪಿ ಕಚೇರಿಯಿಂದ ಆರಂಭ ಗೊಂಡ ಯಾತ್ರೆಯು ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಸಾಗಿ ಬಂತು. ಅಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಯಾತ್ರೆ ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಮೊದಲಾದವರು  ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News