ಭದ್ರಾವತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Update: 2022-08-15 13:06 GMT

ಶಿವಮೊಗ್ಗ: ಕಾರೊಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ.  

ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದಾ ವೇಳೆ ಸಚಿವರ ಬೆಂಗಾವಲು ಪೊಲೀಸ್ ಜೀಪ್ ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಢಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಘಟನೆಯಿಂದ ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News