ಮೂಡ್ಲಕಟ್ಟೆ ಐಎಂಜೆ ಸಮೂಹ ಸಂಸ್ಥೆ, ಇನಾಯತ್ ಆರ್ಟ್ ಗ್ಯಾಲರಿ, ಶಾಂತಿನಿಕೇತನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2022-08-15 15:13 GMT

ಕುಂದಾಪುರ, ಆ.15: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಮೂಡ್ಲಕಟ್ಟೆ ಐಎಂಜೆ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.

ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರರಾವ್ ಮದಾನೆ ಧ್ವಜಾರೋಹಣ ನೆರವೇರಿಸಿದರು. ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ದೆಗಳ ಬಹುಮಾನ ವಿತರಿಸಲಾಯಿತು.

ಐಎಂಜೆ ಐಎಸ್ಸಿ ಸಂಸ್ಥೆಯ ಪ್ರಾಂಶುಪಾಲೆ ಡಾ.ಪ್ರತಿಭಾ ಪಟೇಲ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೆನಿಫರ್ ಫ್ರೀಡ, ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜ, ಪದವಿ ಕಾಲೇಜಿನ ಉಪ ಪ್ರಾಂಶು ಪಾಲ ಪ್ರೊ.ಜಯಶೀಲ್ ಕುಮಾರ ಮೊದಲಾದವರು ಉಪಸ್ಥಿತರಿದ್ದರು.  ವಿದ್ಯಾರ್ಥಿಗಳಿಂದ ವನಮಹೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಉಡುಪಿ ಇನಾಯತ್ ಆರ್ಟ್ ಗ್ಯಾಲರಿ

ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗದಲ್ಲಿರುವ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾ ರೋಹಣವನ್ನು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್  ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತ ಚಿತ್ರಕಲೆ ಸ್ಫರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಆರ್ಟ್ ಗ್ಯಾಲರಿ ಸ್ಥಾಪಕ ಲಿಯಾಕತ್ ಅಲಿ, ನರಸಿಂಹ ಮೂರ್ತಿ, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕಾರ್ಯಕ್ರಮ ನಿರೊಪಿಸಿದರು.

ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ

ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖರ ಸುವರ್ಣ ಮಾರ್ಪಳ್ಳಿ ನೆರವೇರಿಸಿದರು.

ಶಾಲಾ ಸಂಚಾಲಕ ಅಲೆವೂರು ದಿನೇಶ ಕಿಣಿ ಸ್ವಾತಂತ್ರ್ಯದ ಮಹತ್ವ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರೂಪಾ ಡಿ.ಕಿಣಿ ಸ್ವಾಗತಿಸಿದರು. ಶಿಕ್ಷಕಿ ಗಾಯತ್ರಿ ಅರುಣ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಚೈತ್ರ  ಕುಮಾರಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶರತ್ ಎಚ್.ಎಸ್. ಪಥಚಂಚಲನದ ಉಸ್ತುವಾರಿ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News