ಪ್ರಜಾಪ್ರಭುತ್ವ ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ: ಸಿದ್ದರಾಮಯ್ಯ

Update: 2022-08-15 15:50 GMT

ಬೆಂಗಳೂರು, ಆ.15: ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ನಮ್ಮ ನಾಯಕರು ಮಾಡಿದ ತ್ಯಾಗ, ಬಲಿದಾನದ ಪರಿಣಾಮವಾಗಿ ನಾವು ಇಂದು ಸ್ವತಂತ್ರ ವಾತಾವರಣದಲ್ಲಿ ಉಸಿರಾಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸೋಮವಾರ ನಗರದ ಬಸವನಗುಡಿಯಲ್ಲಿರುವ ನ್ಯಾಷನಲ್‍ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ‘ಆಧುನಿಕ ಭಾರತ’ ನಿರ್ಮಾಣಕ್ಕೆ ಶ್ರಮಿಸಿದವರು.ಅವರ ಅಧಿಕಾರ ಅವಧಿಯಲ್ಲಿಆದ ಅನೇಕ ಅಭಿವೃದ್ಧಿ ಕಾರ್ಯಗಳಿಂದಾಗಿ ದೇಶವುಇವತ್ತು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದೆಎಂದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರ್ಣಗೊಂಡಿದ್ದರೂ ಸಮಾಜದಲ್ಲಿನ ರಾಜಕೀಯ, ಆರ್ಥಿಕ ಅಸಮಾನತೆ ಹೋಗಿಲ್ಲ. ಸಂಪತ್ತಿನ ಸಮಾನ ಹಂಚಿಕೆಯಾಗಿಲ್ಲ. ಅಸಮಾನತೆ ಹೋಗದೆಇದ್ದರೆ ಸ್ವಾತಂತ್ರ್ಯಕ್ಕೆ ಅರ್ಥವೇ ಇರುವುದಿಲ್ಲ. ಆದುದರಿಂದ, ದೇಶದ ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆ ಕೊಡಿಸಲು ನಾವು ಸಂಕಲ್ಪ ಮಾಡಬೇಕುಎಂದು ಸಿದ್ದರಾಮಯ್ಯ ಕರೆ ನೀಡಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ವಿಶ್ವಗುರು ದಿಲ್ಲಿಯಲ್ಲಿ ಕುಳಿತುಕೊಂಡು ಸ್ವಾತಂತ್ರ್ಯ ಹತ್ತಿಕ್ಕಲು, ಪ್ರಜಾಪ್ರಭುತ್ವ ಧ್ವಂಸ ಮಾಡಲು ಪ್ರಯತ್ನ ಪಡುತ್ತಿದ್ದಾರೆ. ಹಾಗಾಗಿ ನಾವು ತ್ರಿವರ್ಣಧ್ವಜಕ್ಕೆ ಅಗೌರವ ಸೂಚಿಸುವ ಶಕ್ತಿಗಳ ವಿರುದ್ಧಹೋರಾಟ ಮಾಡಬೇಕಿದೆ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷಕಾಂಗ್ರೆಸ್. ನಾವೆಲ್ಲ ಈ ಪಕ್ಷದ ಸದಸ್ಯರು ಎಂಬ ಹೆಮ್ಮೆಯಿದೆ.ತ್ರಿವರ್ಣಧ್ವಜಕ್ಕೆಅವಮಾನ ಮಾಡುವವರು, ಸಂವಿಧಾನಕ್ಕೆ ಅವಮಾನ ಮಾಡುವವರು ದೇಶದ್ರೋಹಿಗಳು. ದೇಶದ ಪ್ರಥಮ ಪ್ರಧಾನಿ ನೆಹರು ಅವರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆದು ಮನೆಗೆ ಕಳುಹಿಸುವ ಕೆಲಸವನ್ನು ಜನ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News