ರಾಜಭವನದ ಅಂಗಳದಲ್ಲಿ ಧ್ವಜಾರೋಹಣ ನೇರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2022-08-15 16:15 GMT

ಬೆಂಗಳೂರು, ಆ.15: ದೇಶದ 76ನೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot) ಧ್ವಜಾರೋಹಣ ನೆರವೇರಿಸಿದರು.

ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್, ಎಡಿಸಿ ಸಾಬುಥಾಮಸ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿ ಯೋಗೇಶ್ ಉಪಾಧ್ಯಾಯ್, ಒಎಸ್‍ಡಿ ಶಂಕರ್ ಲಾಲ್ ಗುಜರ್, ಗೌತಮ್ ದೇವಿ ದಯಾಳ್, ಆಪ್ತ ಸಹಾಯಕ ಆದರ್ಶ್ ಪಾಸ್ವಾನ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News