×
Ad

ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-08-15 22:03 IST

ಬೆಂಗಳೂರು, ಆ.15: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ  ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಫೋರ್ಸ್ ಕಳುಹಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:  ಸೆಕ್ಷನ್ 144 ಹಿನ್ನೆಲೆ; ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ನಾಳೆ (ಆ.16) ರಜೆ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News