ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಹಿನ್ನೆಲೆ‌; ಆ.16ರಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ

Update: 2022-08-15 16:43 GMT
ಸಾಂದರ್ಭಿಕ ಚತ್ರ

ಶಂಕರಘಟ್ಟ, ಆ. 15: ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News