ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅತೀ ದೊಡ್ಡ ರಾಷ್ಟ್ರಧ್ವಜ ಪ್ರದರ್ಶನ!

Update: 2022-08-15 16:55 GMT

ಕೋಲಾರ, ಆ.15: ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಅತೀ ದೊಡ್ಡದಾದ ತ್ರಿವರ್ಣ ಧ್ವಜವನ್ನು (National flag) ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಪ್ರದರ್ಶಿಸಲಾಯಿತು.

205X30 ಅಡಿ ವಿಸ್ತೀರ್ಣದ ಧ್ವಜ ಇದಾಗಿದೆ. ಧ್ವಜವು ಒಟ್ಟು 1.29 ಲಕ್ಷ ಚದರ ಅಡಿ ಇದ್ದು, ಅದರಲ್ಲಿ ಅಶೋಕ ಚಕ್ರವೇ 3,600 ಚದರ ಅಡಿ ಹೊಂದಿದೆ. 12,800 ಮೀಟರ್ ಬಟ್ಟೆ ಬಳಸಿದ್ದು, 3,200 ಕೆ.ಜಿ ತೂಕ ಹೊಂದಿದೆ.

ಏಳು ಮಂದಿ ಟೈಲರ್‌ಗಳು, 15 ಸಹಾಯಕರು ಹಾಗೂ ಇಬ್ಬರು ಕಲಾವಿದರ ನೆರವಿನಿಂದ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೇವಲ ಏಳು ದಿನಗಳಲ್ಲಿ ನಿರ್ಮಿಸಲಾಗಿದೆ. ಈ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News