ದ.ಕ.ಜಿಲ್ಲೆಯ 26 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

Update: 2022-08-15 17:26 GMT

ಮಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಸರಕಾರಿ ಶಾಲೆಗಳ 26 ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನೀಡಲಾದ ಲ್ಯಾಪ್‌ಟಾಪ್‌ಗಳನ್ನು ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ವಿತರಿಸಿದರು.

ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ದ.ಕ.ಜಿಪಂ ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ಮನಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು

ಬಳಿಕ ಜಿಲ್ಲಾಡಳಿತದ ವತಿಯಿಂದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂತ ಆಗ್ನೇಸ್ ಪ್ರೌಢಶಾಲೆ, ಕೆನರಾ ಪದವಿ ಪೂರ್ವ ಕಾಲೇಜು, ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜು, ಬೆಸೆಂಟ್ ಪದವಿ ಪೂರ್ವ ಕಾಲೇಜು, ಗೋವಿಂದಾಸ್ ಪದವಿ ಪೂರ್ವ ಕಾಲೇಜು, ಗೋವಿಂದಾಸ್ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ದೇಶ ಪ್ರೇಮ ಬಿಂಬಿಸುವ ನೃತ್ಯ ಹಾಗೂ ಗೀತೆಗಳನ್ನು ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News