ತುಮಕೂರು: ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್ ಗೆ ಹಾನಿ

Update: 2022-08-16 08:33 GMT

ತುಮಕೂರು:  ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರ ಇರುವ ಫ್ಲಕ್ಸ್ ಅನ್ನು ಹರಿದು ಹಾಕಿರುವ ಘಟನೆ ನಡೆದಿದೆ.

ನಗರದ ಬಿಜಿಎಸ್ ವೃತ್ತದಿಂದ ಬಸ್ ನಿಲ್ದಾಣದ ಕಡೆಗೆ ತೆರಳುವ ಅಶೋಕ ರಸ್ತೆಯಲ್ಲಿ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್ ಹಾಕಲಾಗಿತ್ತು.

ನಿನ್ನೆ (ಸೋಮವಾರ) ಸ್ವಾತಂತ್ರ್ಯ ದಿನಾಚರಣೆ ಮುಗಿದ ಬಳಿಕ ರಾತ್ರಿ  ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್ ಅನ್ನು ಹರಿದು ಹಾಕಿರುವ ಸಂಗತಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. 

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News