ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ :ಸುಪ್ರೀಂಕೋರ್ಟ್ ನಲ್ಲಿ ಬುಧವಾರ ವಿಚಾರಣೆ

Update: 2022-08-16 09:25 GMT
Photo:PTI

ಹೊಸದಿಲ್ಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಅನ್ನು ಜಾಗತಿಕ ಫುಟ್ಬಾಲ್ ಆಡಳಿತ ಮಂಡಳಿ ಫಿಫಾ ಅಮಾನತುಗೊಳಿಸಿರುವ ವಿಷಯವನ್ನು ಸುಪ್ರೀಂ ಕೋರ್ಟ್(Supreme Court)ಬುಧವಾರ ವಿಚಾರಣೆ ನಡೆಸಲಿದೆ ಎಂದು ಪಿಟಿಐ ವರದಿ ಮಾಡಿದೆ.

ಫಿಫಾ(FIFA) ನಿರ್ಧಾರದಿಂದ ಅಕ್ಟೋಬರ್ 11 ರಿಂದ ಅಕ್ಟೋಬರ್ 30 ರ ನಡುವೆ ನಡೆಯಲಿರುವ 17 ವರ್ಷದೊಳಗಿನವರ ಮಹಿಳಾ ವಿಶ್ವಕಪ್ (Under-17 Women’s World Cup) ಆತಿಥ್ಯ ವಹಿಸುವ ಭಾರತದ ಅವಕಾಶವನ್ನು ಕಸಿದುಕೊಳ್ಳುವ ಕಾರಣ ಫಿಫಾ ನಿರ್ಧಾರದ ಕುರಿತು ಕೇಂದ್ರವು ಮಂಗಳವಾರ ತುರ್ತು ವಿಚಾರಣೆಯನ್ನು ಕೋರಿದೆ.

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಮೇಲೆ ಫಿಫಾ ನಿಷೇಧದ ಕುರಿತು ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರ ಸುಪ್ರೀಂ ಕೋರ್ಟ್ ಪೀಠಕ್ಕೆ ಅಖಿಲ ಭಾರತೀಯ ಫುಟ್ಬಾಲ್ ಫೆಡರೇಶನ್ ಬಗ್ಗೆ "ಕೆಲವು ಬೆಳವಣಿಗೆ" ನಡೆದಿದ್ದು, ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಹೇಳಿದರು ಎಂದು Live Law ವರದಿ ಮಾಡಿದೆ.

ಫಿಫಾ ಸ್ಥಾನಮಾನ ಉಲ್ಲಂಘನೆ ಸೇರಿದಂತೆ ಸಂಸ್ಥೆಯ ಕಾರ್ಯಚಟುವಟಿಕೆಗಳಲ್ಲಿ ಮೂರನೇ ವ್ಯಕ್ತಿಗಳ ಅನಗತ್ಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (ಎಐಎಫ್‍ಎಫ್) ಸಂಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಫಿಫಾ ಮಂಗಳವಾರ ಘೋಷಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News