ಸರ್ಕಾರದ ಕುರಿತು ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಏನು?

Update: 2022-08-16 09:49 GMT

ಬೆಂಗಳೂರು, ಆಗಸ್ಟ್ 16: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ((JC Madhu Swamy) ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

ಸಚಿವರು ಅದನ್ನು  ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ.  ಆದ್ದರಿಂದ ಯಾವುದೇ ತಪ್ಪು ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಮೂರು ತಿಂಗಳ ಹಿಂದೆ  ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದು ಅದು. ಸರ್ಕಾರದಲ್ಲಿ ಎಲ್ಲವೂ ಸರಿ ಇದೆ. ಏನೂ ತೊಂದರೆ ಇಲ್ಲ ಎಂದರು. 

ಇದನ್ನೂ ಓದಿ:  ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡ್ತೀದ್ದೀವಿ ಅಷ್ಟೇ: ಸಚಿವ ಮಾಧುಸ್ವಾಮಿ ಅವರದ್ದೆನ್ನಲಾದ ಆಡಿಯೋ ವೈರಲ್

''ಶಿವಮೊಗ್ಗ ಪ್ರಕರಣ: ಕಟ್ಟುನಿಟ್ಟಿನ ತನಿಖೆಗೆ ಆದೇಶ''

ಸ್ವಾತಂತ್ರ್ಯೋತ್ವದ ಸಂದರ್ಭದಲ್ಲಿ  ಶಿವಮೊಗ್ಗದಲ್ಲಿ ನಿನ್ನೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಕ್ರಿಯೆ ನಡೆಯುವಾಗ ನಾವು ಹೇಳಿಕೆ ನೀಡುವುದು ಸರಿಯಲ್ಲ. ಕಾನೂನಿನ ಪ್ರಕಾರ ಕಟ್ಟುನಿಟ್ಟಿನ ತನಿಖೆ ಮಾಡಲು ಆದೇಶಿಸಲಾಗಿದೆ. ಪೊಲೀಸರು ತಮ್ಮ ಕರ್ತವ್ಯ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News