ಜಿ.ಎಂ.ಹೆಗಡೆಗೆ ವಿ.ಕೃ.ಗೋಕಾಕ್ ಪ್ರಶಸ್ತಿ

Update: 2022-08-16 13:33 GMT

ಬೆಂಗಳೂರು, ಆ.16: ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಧಾರವಾಡದ ಎಂ.ಜಿ. ಹೆಗಡೆ ಅವರನ್ನು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಮತ್ತು ಭಾರತೀಯ ವಿದ್ಯಾಭವನ ನೀಡುವ 2022ನೆಯ ಸಾಲಿನ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಟ್ರಸ್ಟ್‍ನ ಅಧ್ಯಕ್ಷರಾದ ಬಿ.ಎಸ್. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಗೋಕಾಕ್, ಹಿರಿಯ ವಿಮರ್ಶಕರಾದ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಅಭಿನವ ರವಿಕುಮಾರ್ ಅವರನ್ನೊಳಗೊಂಡ ಸದಸ್ಯರು ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯು ರೂ. 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದ್ದು, ಸೆಪ್ಟೆಂಬರ್ ಎರಡನೆಯ ವಾರ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News