ವಿಕಲಚೇತನರ ರಾ.ನೀತಿ: ಸಲಹೆ, ಸೂಚನೆ ಆಹ್ವಾನ

Update: 2022-08-16 15:27 GMT

ಉಡುಪಿ, ಆ.16: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ - Draft National Policy for Persons with Disabilities (Divyangjan)- 2021ಕ್ಕೆ ಸಲಹೆ-ಸೂಚನೆ ಕಳುಹಿಸಲು ಇಲಾಖೆ ವೆಬ್‌ಸೈಟ್- https://dwdsc.karnataka.gov.in- ನಲ್ಲಿ ಆಂಗ್ಲ ಭಾಷೆಯಲ್ಲಿ ಪ್ರಕಟಿಸಲಾಗಿದ್ದು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ, ಸಲಹೆ ಸೂಚನೆಗಳನ್ನು ಆಗಸ್ಟ್ 18 ರ ಒಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News