ಉಡುಪಿ: ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Update: 2022-08-16 15:40 GMT

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ಸಹಯೋಗದಲ್ಲಿ ಇತ್ತೀಚೆಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ, ಗ್ರಂಥಾಲಯ ಜ್ಞಾನದ ಪಿತಾಮಹ ಡಾ. ಎಸ್. ಆರ್.ರಂಗನಾಥನ್ ಇವರ 130ನೇ ಜನ್ಮದಿನಾಚರಣೆ ಪ್ರಯುಕ್ತ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರು.

ಹಿರಿಯ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ, ಡಾ.ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಡಾ.ಎಸ್.ಆರ್. ರಂಗನಾಥನ್ ಇವರು ಗ್ರಂಥಾಲಯ ಚಳುವಳಿಗಾಗಿ ಹೋರಾಡಿದವರು. ಗ್ರಂಥಾಲಯ ಏಳಿಗೆಗಾಗಿ ಶ್ರಮಿಸಿ ಶ್ರೇಷ್ಠ ಜ್ಞಾನದ ಕೊಡುಗೆ ನೀಡಿದವರು. ಗ್ರಂಥಾಲಯ ಜ್ಞಾನದಲ್ಲಿ ಪಂಚಸೂತ್ರಗಳ ಬಗ್ಗೆ ಹಾಗೂ ವರ್ಗೀಕರಣ, ಸೂಚೀಕರಣವನ್ನು ಪರಿಚಯಿಸಿದವರು ಎಂದರು.

ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಾಲಯ ಸಹಾಯಕಿ ಸುನೀತ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News