ಶಿವಮೊಗ್ಗ ಘಟನೆಗೆ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು: ಕೆ.ಎಸ್.ಈಶ್ವರಪ್ಪ ಆರೋಪ

Update: 2022-08-16 16:01 GMT

ಬೆಂಗಳೂರು, ಆ.16: ಶಿವಮೊಗ್ಗದಲ್ಲಿ ಸಾವರ್ಕರ್ ಗೆ ಮತ್ತೊಮ್ಮೆ ಅವಮಾನ ಮಾಡುವ ವಾತಾವರಣ ಸೃಷ್ಟಿಸಿದ್ದಾರೆ. ಈ ಘಟನೆಗೆ ಕಾಂಗ್ರೆಸ್ ಪಕ್ಷದ ಕುಮ್ಮಕ್ಕಿದೆ. ಅವರ ಬೆಂಬಲದಿಂದಲೇ ಈ ಗೂಂಡಾಗಳು ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಮಂಗಳವಾರ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಹಿಂದೆ ಯಾವುದೆ ಸಂಘಟನೆ ಅಥವಾ ವ್ಯಕ್ತಿ ಇದ್ದರೂ ಸುಮ್ಮನೆ ಬಿಡಬಾರದು ಎಂದು ಒತ್ತಾಯಿಸಿದರು.

ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಗಲಭೆ ಉಂಟಾದಾಗ ಪೊಲೀಸರು ಮಧ್ಯಪ್ರವೇಶ ಮಾಡಿ, ಎಲ್ಲರನ್ನೂ ಸಮಾಧಾನಪಡಿಸಿ ಕಳುಹಿಸಿದ್ದಾರೆ. ಈ ವೇಳೆ ಕುತೂಹಲಕ್ಕೆ ಸ್ಥಳಕ್ಕೆ ಬಂದ ಪ್ರೇಮ್‍ಸಿಂಗ್ ಎಂಬ ಯುವಕನಿಗೆ ಕೆಲವು ಗೂಂಡಾಗಳು ಚಾಕು ಇರಿದಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ರಾಜ್ಯದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ. ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಮುಸ್ಲಿಮ್ ಮುಖಂಡರಲ್ಲಿಯೂ ಮನವಿ ಮಾಡುತ್ತೇನೆ. ನಿಮ್ಮ ಸಮುದಾಯದ ಕೆಲವು ಯುವಕರು ದಾರಿ ತಪ್ಪಿ ಇಂತಹ ದುಷ್ಕøತ್ಯಗಳನ್ನು ನಡೆಸುತ್ತಿದ್ದಾರೆ. ಅವರಿಗೆ ಬುದ್ಧಿ ಹೇಳಿ, ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News