ಶ್ರಮ ಯೋಗಿ ಮಾನ್-ಧನ್ ಯೋಜನೆ; ದ.ಕ. ಜಿಲ್ಲೆಗೆ ಟಾಪ್ 12 ಸ್ಥಾನ

Update: 2022-08-16 16:47 GMT

ಮಂಗಳೂರು, ಆ.16: ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದ.ಕ. ಜಿಲ್ಲೆ ಟಾಪ್-12ನೇ ಸ್ಥಾನಗಳಿಸಿದೆ.

ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಲು ಆ.15 ಅಂತಿಮ ಗಡುವು ನೀಡಿತ್ತು. 75 ಜಿಲ್ಲೆಗಳ ಪೈಕಿ 12 ಜಿಲ್ಲೆಗಳು ಶೇ. 100 ಗುರಿ ಸಾಧಿಸಿವೆ.

ಈ ಯೋಜನೆಯಡಿ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಕೈಗೊಂಡ ಕ್ರಮಗಳಿಂದಾಗಿ ದ.ಕ. ಜಿಲ್ಲೆಯೂ ಶೇ. 100 ಗುರಿ ಸಾಧಿಸಿದೆ ಎಂದು  ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News