×
Ad

'ಸಿದ್ದರಾಮಯ್ಯ ಸಿಎಂ ಆಗಲಿ' ಎಂಬ ಸಚಿವ ಶ್ರೀರಾಮುಲು ಹೇಳಿಕೆ ಕುರಿತು ವಿಧಾನಸಭೆ ವಿಪಕ್ಷ ನಾಯಕರ ಪ್ರತಿಕ್ರಿಯೆ ಏನು?

Update: 2022-08-16 22:39 IST

ಬೆಂಗಳೂರು, ಆ.16: 'ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ' ಎಂಬ ಸಾರಿಗೆ ಸಚಿವ ಬಿ.ಶ್ರೀ ರಾಮುಲು (B. Sriramulu)  ಅವರ ಹೇಳಿಕೆ ಕುರಿತು ವಿಧಾನಸಭೆ ವಿಪಕ್ಷ ನಾಯಕ ಪ್ರತಿಕ್ರಿಯಿಸಿದ್ದಾರೆ. 

''ಸಚಿವ ಶ್ರೀರಾಮುಲು ವಿಚಾರವಾಗಿ ನಾನು ಮಾತನಾಡುವುದಿಲ್ಲ. ಅವರು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರು. ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದರು. ಆದರೆ ಮಾಡಲಿಲ್ಲ. ಇನ್ನು ಪರಿಶಿಷ್ಟರ ಮೀಸಲಾತಿ ಹೆಚ್ಚಿಸಬೇಕು ಹಾಗೂ ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೊಳಿಸಬೇಕು ಎಂದು ಆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ, ಈ ಸರಕಾರಕ್ಕೆ ಮಾನ ಮರ್ಯಾದೆ ಇಲ್ಲವಾಗಿದೆ. ಹೀಗಾಗಿ ಅವರು ಭ್ರಮನಿರಸನರಾಗಿದ್ದಾರೆ'' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

'ಅವಕಾಶ ಬಂದಾಗ ಸಿದ್ದರಾಮಯ್ಯ  ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ' ಎಂದು ಸಚಿವ ಬಿ.ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News