ಭ್ರಷ್ಟಾಚಾರಕ್ಕೆ ಬೇಸತ್ತು ಗ್ರಾ.ಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಪ್ರಣವಾನಂದ ಸ್ವಾಮೀಜಿ

Update: 2022-08-16 18:03 GMT

ಹಾವೇರಿ, ಆ.16: ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ತಮ್ಮ ಪಂಚಾಯತ್ ಸದಸ್ಯತ್ವ ಸ್ಥಾನಕ್ಕೆ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ನೀಡಿದ್ದಾರೆ.

ಇಂದು (ಮಂಗಳವಾರ) ಹಾವೇರಿ ಜಿಲ್ಲಾಡಳಿತ ಕಚೇರಿಗೆ ತೆರಳಿ ಜಿಲ್ಲಾ ಪಂಚಾಯತ್ ಸಿಇಓ ಮಹ್ಮದ್ ರೋಷನ್‌ ಅವರಿಗೆ ಪ್ರಣವಾನಂದ ಸ್ವಾಮೀಜಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. 

ರಾಜೀನಾಮೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ಅರೇಮಲ್ಲಾಪುರ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಪ್ರಣವಾನಂದ ಸ್ವಾಮೀಜಿ, ಗ್ರಾ.ಪಂ ನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಿಂದ ಬೇಸತ್ತು ಗ್ರಾಮ ಪಂಚಾಯಿತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಹೇಳಿದ್ದಾರೆ. 

''ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಒಬ್ಬ ವಿದ್ಯಾವಂತನಿಗೆ ಸಮಾಜದ ಗುರುವಿಗೆ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹತಾಶೆ ವ್ಯಕ್ತಪಡಿಸಿದ ಪ್ರಣವಾನಂದ ಶ್ರೀ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಹಗರಣಗಳು ನಡೆಯುತ್ತಿದೆ. ಬೆಳಗಾವಿಯ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಂತೆ ನಮಗೂ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರಲಿದೆ'' ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ:  ಬಿಲ್ಲವ ಸಮುದಾಯದ ನಿರ್ಲಕ್ಷ್ಯ| ಸಚಿವ ಕೋಟ, ಸುನೀಲ್ ರಿಂದ ಹೋರಾಟ ಹತ್ತಿಕ್ಕುವ ಯತ್ನ: ಪ್ರಣಾವನಂದ ಸ್ವಾಮೀಜಿ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News