ಕೆ.ಆರ್.ಪುರ: ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಸನ್ಮಾನ
Update: 2022-08-16 23:37 IST
ಬೆಂಗಳೂರು, ಆ.16: ಬೆಂಗಳೂರು ವಿಶ್ವವಿದ್ಯಾಲಯದ ಎಂ.ಎ. ಕನ್ನಡ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ಕೆ.ಆರ್.ಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗಳಾದ ಕುಸುಮಾ ಯಾದವ್ ಎಂ.ಎಂ, ದ್ವಿತೀಯ ರ್ಯಾಂಕ್ ಗಳಿಸಿದ ಆಶಾ ಎಸ್. ಹಾಗೂ ರಾಜಕೀಯ ಶಾಸ್ತ್ರ ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ ರಮಾ ಅವರಿಗೆ ಸನ್ಮಾನಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕೆ.ಆರ್.ಪುರದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಂಗಳೂರು ಪೂರ್ವ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಅಜೀತ್ ಕುಮಾರ್ ರೈ ಅವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಡಿ.ರಾಜಣ್ಣ, ಡಾ.ಟಿ.ಯಲ್ಲಪ್ಪ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.