ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ

Update: 2022-08-16 18:49 GMT

ಬೆಂಗಳೂರು, ಆ.16: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರಿನ ಗುಪ್ತಚರದಳ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಹಕಾಯ್ ಅಕ್ಷಯ್ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ. ಅದೇ ರೀತಿ ಡಾ.ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರಿನ ಕೆಎಸ್ಆರ್ ಪಿ ಒಂದನೆ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News