ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಮುಕ್ತ ಅವಕಾಶ: ಸಚಿವ ಬಿ.ಸಿ.ನಾಗೇಶ್
Update: 2022-08-17 13:10 IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಮವಸ್ತ್ರ ಸಂಹಿತೆ ಪಾಲಿಸಬೇಕು ಹಾಗು ಧಾರ್ಮಿಕ ಸಂಕೇತಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಅವಕಾಶ ಇಲ್ಲವೆಂದ ಸರಕಾರ ಈಗ ಗಣೇಶ ವಿಗ್ರಹ ಇಟ್ಟು ಪೂಜಿಸಲು ಹೇಗೆ ಅವಕಾಶ ನೀಡುತ್ತಿದೆ ಎಂದು ಜನರು, ವಿವಿಧ ಧಾರ್ಮಿಕ, ಸಾಮಾಜಿಕ ಮುಖಂಡರು, ಶಿಕ್ಷಣ ತಜ್ಞರು ಪ್ರಶ್ನಿಸುತ್ತಿದ್ದಾರೆ.
ಗಣೇಶ ಮೂರ್ತಿ ಕೂರಿಸುವ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.