×
Ad

ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ: ಬಿ.ಎಸ್.ಯಡಿಯೂರಪ್ಪ

Update: 2022-08-17 18:45 IST

ಬೆಂಗಳೂರು: 'ಕೇಂದ್ರಿಯ ಸಂಸದೀಯ ಹಾಗೂ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಮಾಡಿರುವುದಕ್ಕೆ  ಅತ್ಯಂತ ಸಂತೋಷ ತಂದಿದೆ. ವಿನಮ್ರತೆಯಿಂದ ಸ್ವೀಕರಿಸಿ, ದಕ್ಷಿಣ ಭಾರತ ಹಾಗೂ ರಾಜ್ಯದಲ್ಲಿ ಸಂಚರಿಸಿ ಅಧಿಕಾರಕ್ಕೆ ತರಲು ಪ್ರಮಾಣಿಕ ಪ್ರಯತ್ನ ನಡೆಸಲಾಗುವುದು, ನಿಜವಾದ ಕಾರ್ಯಕರ್ತರನ್ನು ಬಿಜೆಪಿ (BJP) ಕೈ ಬಿಡಲ್ಲ ಎಂಬುದಕ್ಕೆ ಇದೊಂದು ಸಾಕ್ಷಿ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B. S. Yediyurappa) ಹೇಳಿದ್ದಾರೆ.

ಇಂದು ತಮ್ಮ ನಿವಾಸ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಪಕ್ಷ ಅಧಿಕಾರಕ್ಕೆ ಬರಲು ಪ್ರಮಾಣಿಕವಾಗಿ ಶ್ರಮಿಸಲಾಗುವುದು. ದಕ್ಷಿಣ ಭಾರತದಲ್ಲಿ ಕೂಡ ಪಕ್ಷ ಅಧಿಕಾರಕ್ಕೆ  ಬರಲು ಶ್ರಮಿಸಲಾಗುವುದು'. ಎಂದು  ತಿಳಿಸಿದರು.

'ಕೇಂದ್ರ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ಪ್ರಮಾಣಿಕವಾಗಿ ರಾಜ್ಯದ ಎಲ್ಲೆಡೆ ಸಂಚರಿಸಿ ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು. ಸ್ವಂತ ಬಲದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಮೂಹಿಕವಾಗಿ ಪ್ರಯತ್ನಿಸಲಾಗುವುದು. ಯಡಿಯೂರಪ್ಪ ಒಬ್ಬರೇ ಅಲ್ಲ ಎಲ್ಲರೂ ಒಟ್ಟುಗೂಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು' ಎಂದರು.

'ನಾನು ಯಾವುದೇ ಇಂತಹ ಸ್ಥಾನಮಾನ ನಿರೀಕ್ಷೆ ಮಾಡಿರಲಿಲ್ಲ. ಇಂತಹ ಬೆಳವಣಿಗೆಯಿಂದ  ಆನೆ ಬಲ ಬಂದತಾಗಿದೆ' ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಗೋಪಾಲಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ  ರವಿಕುಮಾರ್, ಶಾಸಕರಾದ ಎಂ.ಪಿ.ಕುಮಾರ ಸ್ವಾಮಿ, ರೇಣುಕಾಚಾರ್ಯ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News