ಬೆಂಗಳೂರು | ಮಹಿಳಾ ಟೆಕ್ಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ದೂರು

Update: 2022-08-17 13:23 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.17: ಖಾಸಗಿ ಕಂಪೆನಿ ಸಿಇಒ ತನ್ನ ಮಹಿಳಾ ಟೆಕ್ಕಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬೆಳ್ಳಂದೂರು ಫೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಣಯ್ ಶ್ರೀವಾಸ್ತವ್ ಎಂಬಾತನ ವಿರುದ್ಧ ಸಂತ್ರಸ್ತೆ ದೂರು ಸಲ್ಲಿಕೆ ಮಾಡಿದ್ದಾರೆ.

ಬೆಳ್ಳಂದೂರಿನ ಎಸ್‍ಜೆಆರ್ ವಾಟರ್ ಮಾರ್ಕ್ ಅಪಾರ್ಟ್‍ಮೆಂಟ್‍ನಲ್ಲಿ ಸಹೋದ್ಯೋಗಿಯ ಹುಟ್ಟುಹಬ್ಬದ ಆಚರಣೆಗೆಂದು ಸಂತ್ರಸ್ತ ಯುವತಿ ತೆರಳಿದಾಗ ಆತ ಆಕೆಯ ಮೊಬೈಲ್ ಕಸಿದುಕೊಂಡಿದ್ದ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಘಟನೆ ಬಗ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಮೇಲಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಟೆಕ್ಕಿ ಆರೋಪಿಸಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News