ಲಂಚ ಪ್ರಕರಣ | ಮಂಜುನಾಥ್ ಜಾಮೀನು ಕೋರಿ ಅರ್ಜಿ: ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂಕೋರ್ಟ್

Update: 2022-08-17 18:19 GMT

ನವದೆಹಲಿ, ಆ.17: ಲಂಚ ಸ್ವೀಕಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್, ವಿವರಣೆ ಕೇಳಿ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಸುಪ್ರೀಂಕೋರ್ಟ್ ನ್ಯಾಯಪೀಠದ ಮುಂದೆ ವಿಚಾರಣೆ ನಡೆದ ವೇಳೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು. 

ಮಂಜುನಾಥ್ ಅವರು 5 ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಮಂಜುನಾಥ್ ಅವರನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮಂಜುನಾಥ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಮಂಜುನಾಥ್ ಸುಪ್ರೀಂಕೋರ್ಟ್‍ಗೆ ಮೊರೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ಮಂಜುನಾಥ್ ಅವರು 3ನೆ ಆರೋಪಿಯಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News