‌ಉಡುಪಿಯಲ್ಲಿ ಸಾವರ್ಕರ್(Savarkar) ಪ್ರತಿಮೆ ಸ್ಥಾಪನೆಗೆ ಅನುಮತಿ ಕೋರಿ ಯಶ್ಪಾಲ್ ಸುವರ್ಣ ಅರ್ಜಿ

Update: 2022-08-18 07:06 GMT
ಉಡುಪಿ ನಗರದ ಬ್ರಹ್ಮಗಿರಿ ವೃತ್ತದಲ್ಲಿ ಆ.15ರಂದು ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಕಾರಣವಾಗಿತ್ತು.

ಉಡುಪಿ, ಆ.18: ಉಡುಪಿ(Udupi)ಯ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ (Vinayak Damodar Savarkar)ರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ(BJP) ಮುಖಂಡ ಯಶ್ಪಾಲ್ ಸುವರ್ಣ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಾವರ್ಕರ್ ಅವರ ಪುತ್ಥಳಿ ನಿರ್ಮಿಸುವ ಮೂಲಕ ಸಮಸ್ತ ದೇಶಪ್ರೇಮಿಗಳ ಪರವಾಗಿ ಅವರಿಗೆ ಗೌರವ ಸಲ್ಲಿಸಲು ಬಯಸಿದ್ದೇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ನಗರದ ಬ್ರಹ್ಮಗಿರಿ ವೃತ್ತದಲ್ಲಿ ಆ.15ರಂದು ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ಪರ- ವಿರೋಧ ಚರ್ಚೆ ಹುಟ್ಟು ಹಾಕಿರುವ ಬೆನ್ನಿಗೆ ಈ ಬೆಳವಣಿಗೆ ನಡೆದಿದೆ.

ಬಿಜೆಪಿ ಮತ್ತು ಕೆಲ ಸಂಘಟನೆಗಳು ಬುಧವಾರ ಭಾರೀ ಸಂಖ್ಯೆಯಲ್ಲಿ ಸೇರಿ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದವಲ್ಲದೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದವು.

ಇದನ್ನೂ ಓದಿ: ಕೊಡಗು: ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ BJP ಯುವ ಮೋರ್ಚಾ ಕಾರ್ಯಕರ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News