2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

Update: 2022-08-18 08:50 GMT

ಬೆಂಗಳೂರು: 2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ಜಾನಪದ ಕ್ಷೇತ್ರ ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಮಂಡ್ಯ ಜಿಲ್ಲೆಯ ವ.ನಂ. ಶಿವರಾಮು ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಡಾ. ಶಂಭು ಬಳಿಗಾರ ಅವರನ್ನು ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ 25,000 ರೂ. ಮತ್ತು ಇಬ್ಬರು ಕ್ಷೇತ್ರ ತಜ್ಞರಿಗೆ 50, 000 ರೂ. ಮೊತ್ತದ ಜೊತೆಗೆ ಸ್ಮರಣಿಕೆ , ಶಾಲು, ಹಾರ ಹಾಗೂ ಫಲ ತಾಂಬೂಲ ನೀಡಿ ಗೌರವಿಸಲಾಗುವುದು ಎಂದು ಅಕಾಡೆಮಿ ಪ್ರಕಟನೆಯಲ್ಲಿ ತಿಳಿಸಿದೆ. 

2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News