ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

Update: 2022-08-18 10:04 GMT

ಮಡಿಕೇರಿ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಕೊಯನಾಡು ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.‌

ಬಳಿಕ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಮೊಣ್ಣಂಗೇರಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರ ಅಹವಾಲು ಆಲಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು. 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ... ಕೊಡಗು: ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ BJP ಯುವ ಮೋರ್ಚಾ ಕಾರ್ಯಕರ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News