ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ಕಾಂಗ್ರೆಸ್ ನಿಂದ ಪ್ರತಿಭಟನೆ
Update: 2022-08-18 15:44 IST
ಮಡಿಕೇರಿ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿ, ಸಿದ್ದರಾಮಯ್ಯ ಚಿತ್ರ ಇರುವ ಫ್ಲೆಕ್ಸನ್ನು ಹರಿದು ಹಾಕಿದ್ದು, ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು.
''ಮಾಜಿ ಮುಖ್ಯ ಮಂತ್ರಿಗಳಿಗೆ ರಕ್ಷಣೆ ನೀಡುವಲ್ಲಿ ಕೊಡಗು ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ''ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ನಗರಕ್ಕೆ ಕೊಡಗು ಪಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ ಭೇಟಿ ನೀಡಿ, ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.