ಚಾಮರಾಜನಗರ | ಹುಲಿ ಉಗುರು ಮಾರಾಟ ಯತ್ನ: ಆರೋಪಿಗಳಿಬ್ಬರ ಬಂಧನ

Update: 2022-08-18 12:54 GMT

ಚಾಮರಾಜನಗರ:  ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ್ದ ಆರೋಪದಡಿ ಇಬ್ಬರನ್ನು ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ.

ಚಾಮರಾಜನಗರದ ನಿಜಗುಣ ರೆಸಿಡೆನ್ಸಿ ಬಳಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ್ದ ನಗರದ ಕೆ.ಪಿ.ಮೊಹಲ್ಲಾದ ನಿವಾಸಿ ಯಾಸೀರ್ ಅಹಮದ್ (19), ಮುಬಾರಕ್ ಮೊಹಲ್ಲಾದ ನಿವಾಸಿ, ಫರ್ಹಾದ್ ಉರ್ ರೆಹಮಾನ್ ಷರೀಷ್(33) ಅನ್ನು ಸಿ.ಇ.ಎನ್ ಪೋಲೀಸರು ಬಂಧಿಸಿದ್ದಾರೆ. ಇವರಿಬ್ಬರಿಂದ ಬೆರಳಿನ ಮೂಳೆ ಸಮೇತ ಇದ್ದ 8 ಹುಲಿ ಉಗುರುಗಳನ್ನು ವಶ ಪಡಿಸಿಕೊಂಡಿದ್ದಾರೆ.

ನಗರದ ಕರಿನಂಜನಪುರ ರಸ್ತೆಯಲ್ಲಿ ಅಂಬೇಡ್ಕರ್‌ ಭವನದ ಬಳಿ ಬುಧವಾರ ಬೆಳಿಗ್ಗೆ 11.30ರ ಸುಮಾರಿಗೆ ಆರೋಪಿಗಳು ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಇಎನ್‌ ಠಾಣೆ ಇನ್‌ಸ್ಪೆಕ್ಟರ್‌ ಮಹದೇವಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ಹುಲಿ ಉಗುರುಗಳನ್ನು ವಶಕ್ಕೆ ಪಡೆಯಿತು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಸಿ.ಎ.ಎನ್ ಠಾಣೆಯ ಪಿಎಸ್ಐ ಮಾದೇಶ್, ಇನ್ಸ್ಪೆಕ್ಟರ್ ಮಹದೇವಶೆಟ್ಟಿ ಮತ್ತು ಸಿಬ್ಬಂದಿ ಎಂ.ಮಹೇಶ, ಮಂಜುನಾಥ, ರಾಜು, ಜಗದೀಶ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿನಂದನೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News