ವಿಪಕ್ಷ ನಾಯಕರಿಗೇ ಈ ರಾಜ್ಯದಲ್ಲಿ ಭದ್ರತೆ ಇಲ್ಲ: BJP ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

Update: 2022-08-18 13:04 GMT

ಬೆಂಗಳೂರು: 'ಮಡಿಕೇರಿ ಭೇಟಿಗೆ ಆಗಮಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಯುವ BJP ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದಿರುವುದು ಹೇಡಿಗಳ ಲಕ್ಷಣ. ಈ‌ ಕೃತ್ಯ ಅವರ ಹತಾಶೆ ತೋರಿಸುತ್ತಿದೆ. ಸಿದ್ದರಾಮಯ್ಯರವರನ್ನು ಸೈದಾಂತಿಕವಾಗಿ ಎದುರಿಸಲಾಗದ BJP ಇಂತಹ ಹೀನ ನಡೆ ಪ್ರದರ್ಶಿಸುತ್ತಿದೆ. ಇದೊಂದು ಸರ್ಕಾರಿ ಪ್ರಾಯೋಜಿತ ಗಲಭೆ' ಎಂದು ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ' ಮಡಿಕೇರಿಯಲ್ಲಿ BJP ಕಾರ್ಯಕರ್ತರು ಗೂಂಡಾ ವರ್ತನೆ ತೋರಿಸಿದ್ದಾರೆ. ವಿಪಕ್ಷ ನಾಯಕರಿಗೇ ಈ ರಾಜ್ಯದಲ್ಲಿ ಭದ್ರತೆ ಇಲ್ಲ. ಇನ್ನು ಜನಸಾಮಾನ್ಯರಿಗೆ ರಕ್ಷಣೆ ಎಲ್ಲಿ? ಇದು ಗಂಭೀರ ಸ್ವರೂಪದ ಭದ್ರತಾ ಲೋಪ. ಇಂತಹ ಕಿಡಿಗೇಡಿ‌ ಕೃತ್ಯ ನಡೆಸುವ ಮೂಲಕ ವಿಪಕ್ಷದ ಬಾಯಿ ಮುಚ್ಚಿಸಬಹುದು ಎಂದು ಸರ್ಕಾರ ಭಾವಿಸಿರಬಹುದು. ಆದರೆ ನಾವು ಹೆದರುವ ಪ್ರಶ್ನೆಯೇ ಇಲ್ಲ' ಎಂದು ಹೇಳಿದ್ದಾರೆ. 

'ಸಿದ್ದಾರಾಮೋತ್ಸವ ದ ಭರ್ಜರಿ ಯಶಸ್ಸಿನ ಬಳಿಕ BJPಯವರಿಗೆ ನಡುಕ ಶುರುವಾಗಿದೆ‌. ಹಾಗಾಗಿ ಸಿದ್ದರಾಮಯ್ಯರ ಮೇಲಿನ ಅಸಹನೆಯಿಂದ ಕಾರ್ಯಕರ್ತರನ್ನು ಛೂ ಬಿಟ್ಟು ಘೇರಾವ್ ಹಾಕಿಸುವ ಕೆಲಸ ಮಾಡುತ್ತಿದ್ದಾರೆ. BJPಯವರ ಈ ಷಡ್ಯಂತ್ರಕ್ಕೆ ಕಾಂಗ್ರೆಸ್ ಆಗಲಿ ಸಿದ್ದರಾಮಯ್ಯರಾಗಲಿ ಸೊಪ್ಪು‌ ಹಾಕುವುದಿಲ್ಲ. BJPಯವರು ಹೇಡಿಗಳಂತೆ ವರ್ತಿಸುವುದು ಬಿಡಲಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News