ಸಮಸ್ಯೆ ಕೇಳಲು ಬಂದವರ ಮೇಲೆ ಮೊಟ್ಟೆ ಎಸೆತ ಸರಿಯಲ್ಲ: ಕುಮಾರಸ್ವಾಮಿ

Update: 2022-08-18 17:57 GMT

ಬೆಂಗಳೂರು: ಮಡಿಕೇರಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

''ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ನಾನು ಖುಷಿ ಪಡಲ್ಲ. ಇಂಥ ಘಟನೆಗಳು ನಡೆಯಬಾರದು.  ಜನರ ಸಮಸ್ಯೆ ಕೇಳಲು ಬಂದವರ ಮೇಲೆ ಮೊಟ್ಟೆ ಎಸೆತ ಸರಿಯಲ್ಲ. ಮೊಟ್ಟೆ ಎಸೆದ ಸಂಘಟನೆಯವರು ಮಡಿಕೇರಿಗೆ ಗೌರವ ತಂದಿದ್ದೀರಾ?, ಅಥವಾ ಮಳೆಯಿಂದ ಕೊಡಗು ಜಿಲ್ಲೆಗೆ ಆದ ಅನಾಹುತಗಳನ್ನು ಸರಿಪಡಿಸಿಕೊಂಡಿದ್ದೀರಾ? '' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿ, 'ಪ್ರಜಾಪ್ರಭುತ್ವದಲ್ಲಿ ಸಿದ್ಧರಾಮಯ್ಯ ತಮ್ಮ ವಿಚಾರ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಶಾಂತಿ ಮೂಡಿಸುವ ಕೆಲಸ ಸರಿ ಅಲ್ಲ‌. ಇದು ಸಿದ್ದರಾಮಯ್ಯಗೆ ಅವಮಾನ ಅಲ್ಲ, ರಾಜ್ಯಕ್ಕೆ ಆದ ಅವಮಾನ. ಅವಮಾನದ ಜವಬ್ದಾರಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹೊತ್ತುಕೊಳ್ಳಬೇಕು' ಎಂದು ಹೇಳದ್ದಾರೆ.

ಇದನ್ನೂ ಓದಿಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News