ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರ: ಪೊಲೀಸ್ ಆಯುಕ್ತರು, ಎಸ್ಪಿಗಳ ಜೊತೆ ಎಡಿಜಿಪಿ ಚರ್ಚೆ

Update: 2022-08-18 18:00 GMT
ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು, ಆ.18: ಸ್ವಾತಂತ್ರದ ಅಮೃತ ಮಹೋತ್ಸವದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದ ಕೆಲವೆಡೆ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಉಂಟಾಗಿರುವ ವಿವಾದಗಳ ಹಿನ್ನೆಲೆಯಲ್ಲಿ ಎಡಿಜಿಪಿ(ADGP) ಅಲೋಕ್ ಕುಮಾರ್( Alok Kumar) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರ್ ಜತೆ ಗುರುವಾರ ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಈ ಸಭೆಯಲ್ಲಿ ಭಾಗವಹಿಸಿ ಮಂಗಳೂರು ನಗರ ಮತ್ತು ಜಿಲ್ಲೆಯ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ್ದಾರೆ.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಲುವಾಗಿ ನಡೆಸುವ ಮೊಸರು ಕುಡಿಕೆ ಉತ್ಸವಕ್ಕೆ ಭದ್ರತೆ, ಗಣೇಶ ಚತುರ್ಥಿ ಹಬ್ಬಕ್ಕೆ ಸಂಬಂಧಿಸಿ ಕೈಗೊಳ್ಳಲಿರುವ ಮುಂಜಾಗ್ರತಾ ಕ್ರಮಗಳನ್ನು ಎಡಿಜಿಪಿ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಸಂಭವಿಸಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸುವಂತೆ, ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ರೌಡ್‌ಶೀಟ್‌ನಲ್ಲಿರುವ ವ್ಯಕ್ತಿಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಮತ್ತು ರೌಡಿ ಶೀಟ್‌ನಲ್ಲಿ ಹೆಸರಿದ್ದು ತಲೆ ಮರೆಸಿಕೊಂಡಿರುವವರನ್ನು ಕೂಡ ಪತ್ತೆ ಮಾಡುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್ ಗೆ 14 ದಿನಗಳ ನ್ಯಾಯಾಂಗ ಬಂಧನ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News