ಸಾಗರ ಸ್ವಚ್ಛತೆಯಿಂದ ಸಮುದ್ರ ಜೀವಿಗಳ ಸಂರಕ್ಷಣೆ: ಡಾ. ಉದಯ್ ಶೆಟ್ಟಿ

Update: 2022-08-18 18:22 GMT

ಉಡುಪಿ: ಸಾಗರವನ್ನು ಸ್ವಚ್ಛವಾಗಿರಿಸುವ ಮೂಲಕ ಸಮುದ್ರದ ಲ್ಲಿರುವ ಜೀವಿಗಳ ಸಂರಕ್ಷಣೆ ಮಾಡುವುದರ ಜೊತೆಗೆ ಜನರ ಆರೋಗ್ಯವನ್ನೂ ಕಾಪಾಡುವುದು ‘ಸ್ವಚ್ಛ ಸಾಗರ ಸುರಕ್ಷಿತ ಸಾಗರ್’ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಡಾ.ಉದಯ ಶೆಟ್ಟಿ ಹೇಳಿದ್ದಾರೆ.

ಗುರುವಾರ ಮಲ್ಪೆಯಲ್ಲಿ ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ, ಸಮುದ್ರಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನ ಕೇಂದ್ರ ಹಾಗೂ ಎ.ಟಿ.ಎ.ಎಲ್ ಭವನ್ ಕೊಚ್ಚಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಸ್ವಚ್ಛ್ ಸಾಗರ್ ಸುರಕ್ಷಿತ್ ಸಾಗರ್’ ಕಾರ್ಯಕ್ರಮದಲ್ಲಿ ಸಮುದ್ರ ಮಾಲಿನ್ಯ ಮತ್ತು ಕಡಲ ತೀರದ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಪ್ರವಾಸಿಗರನ್ನು ಆರ್ಕಷಿಸಲು ಬೀಚ್ ಸುತ್ತಮುತ್ತಲು ಸ್ವಚ್ಛತೆಯನ್ನು ಕಾಪಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಂಸ್ಥೆಯು ಸ್ವಚ್ಛತೆಗೆ ಹೆಚ್ಚು ಪ್ರೋತ್ಸಾಹ ನೀಡಿದೆ ಎಂದ ಅವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೂಡ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾುತು.
ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀಮಂಜುನಾಥ್, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಧನಂಜಯ್ ಕಾಂಚನ್, ಮಾಧವ ಕೃಪ ಸ್ಕೂಲ್‌ನ ಉಪ ಪ್ರಾಂಶುಪಾಲೆ ಜ್ಯೋತಿ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News