ಆ. 26ರಂದು ಕೊಡಗಿನಲ್ಲಿ ಎಸ್ಪಿ ಕಚೇರಿಗೆ ಮುತ್ತಿಗೆ: ಮಾಜಿ ಸಿಎಂ ಸಿದ್ದರಾಮಯ್ಯ

Update: 2022-08-19 06:27 GMT

ಬೆಂಗಳೂರು : ಮಳೆ ಹಾನಿ ವೀಕ್ಷಣೆಗೆ ಕೊಡಗು ಜಿಲ್ಲೆಗೆ ತೆರಳಿದ್ದಾಗ ನಡೆದ ಘಟನೆಯು ಸರ್ಕಾರದ ಪ್ರಾಯೋಜಿತ ಪಿತೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾನೂನು- ಸುವ್ಯವಸ್ಥೆ ಕಾಪಾಡಲು ವಿಫಲರಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರು ಪ್ರವಾಸದಲ್ಲಿರುವ ಅವರು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಆ. 26ರಂದು ಪ್ರತಿಭಟನೆ ಮಾಡುತ್ತೇವೆ. ಕೊಡಗಿನ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿದ್ದೇವೆ ಎಂದು ತಿಳಿಸಿದರು.

ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಟ್ವೀಟ್‌ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News